×
Ad

ಜೂ.17ರಂದು ಕರಾವಳಿಯಲ್ಲಿ ಬಕ್ರೀದ್

Update: 2024-06-07 19:43 IST

ಸಾಂದರ್ಭಿಕ ಚಿತ್ರ

ಮಂಗಳೂರು, ಜೂ.7: ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ದುಲ್‌ಹಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಸೂಚಿಸಿರುವುದಾಗಿ ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಉಳ್ಳಾಲ: ದುಲ್ ಹಜ್ಜ್ ತಿಂಗಳ ಪ್ರಥಮ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಜೂ.17ರಂದು ಬಕ್ರೀದ್ ಹಬ್ಬದ ದಿನವಾಗಿದ್ದು, ಜೂ.16ರಂದು ಅರಫಾ ದಿನ ಆಗಿರುತ್ತದೆ ಎಂದು ಉಳ್ಳಾಲ ಖಾಝಿ ಅಸ್ಸಯಿದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ತಿಳಿಸಿರುವುದಾಗಿ ಉಳ್ಳಾಲ ಕೇಂದ್ರ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ ಅಧ್ಯಕ್ಷರಾದ ಬಿ.ಜಿ ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ‌.

ಬೆಂಗಳೂರು: ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇರುವ ರಾಜ್ಯ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆದ ರಾಜ್ಯ ಚಂದ್ರ ದರ್ಶನ ಸಮಿತಿ ಸಭೆಯಲ್ಲಿ ಈದ್ ಉಲ್ ಅಝ್ಹಾ ಜೂ.17ರಂದು ಆಚರಿಸುವುದಾಗಿ ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಸಭೆಯ ಬಳಿಕ ಸಮಿತಿಯ ಸದಸ್ಯ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ ಅವರು ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News