×
Ad

ಜೂ.29ರಂದು ರಾಜ್ಯಾದ್ಯಂತ ಈದುಲ್ ಅಝ್ ಹಾ ಆಚರಣೆ; ಅಮೀರೆ ಶರೀಅತ್

Update: 2023-06-19 21:02 IST

ಬೆಂಗಳೂರು, ಜೂ.19: ರಾಯಚೂರು ಜಿಲ್ಲೆಯ ಮಾನ್ವಿ ಹಾಗೂ ಕಲಬುರಗಿ, ತಮಿಳುನಾಡು ಹಾಗೂ ಉತ್ತರಪ್ರದೇಶದ ಬನಾರಸ್‍ನಲ್ಲಿ ಸೋಮವಾರ ದುಲ್ಹಜ್ ತಿಂಗಳ ಚಂದ್ರದರ್ಶನವಾದ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜೂ.29ರಂದು ರಾಜ್ಯಾದ್ಯಂತ ಈದುಲ್ ಅಝ್ ಹಾ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಅಮೀರೆ ಶರೀಅತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ತಿಳಿಸಿದ್ದಾರೆ.

ಸೋಮವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಮಂಡಳಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರೀಯ ಚಂದ್ರದರ್ಶನ ಸಮಿತಿಯ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ಸಭೆಯಲ್ಲಿ ಚಂದ್ರದರ್ಶನ ಸಮಿತಿಯ ಸದಸ್ಯರಾದ ಮೌಲಾನ ಮಕ್ಸೂದ್ ಇಮ್ರಾನ್ ರಶಾದಿ, ಮುಫ್ತಿ ಇಫ್ತಿಖಾರ್ ಅಹ್ಮದ್ ಖಾಸ್ಮಿ, ಮೌಲಾನ ಅಬ್ದುಲ್ ಖದೀರ್ ವಾಜೀದ್, ಮೌಲಾನ ಏಜಾಝ್ ಅಹ್ಮದ್ ನದ್ವಿ, ಖಾರಿ ಮುಹಮ್ಮದ್ ಝುಲ್ಫಿಖಾರ್ ರಝಾ ನೂರಿ ಹಾಗೂ ಮೌಲಾನ ಸೈಯದ್ ಮನ್ಝೂರ್ ರಝಾ ಆಬಿದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News