×
Ad

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಕಾರು; ಮೂವರು ಮೃತ್ಯು

Update: 2024-06-07 11:07 IST

ಚಿಕ್ಕಬಳ್ಳಾಪುರ:  ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಜನರಲ್ಲಿ ಮೂವರು ಸಾವನ್ನಪ್ಪಿದ್ದು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ಗ್ರಾಮಾಂತರ ಪ್ರದೇಶದ ನಗರಗೆರೆ ಬಳಿ  ನಡೆದಿರುವ ಬಗ್ಗೆ ವರದಿಯಾಗಿದೆ.

ಶುಕ್ರವಾರ ಮುಂಜಾನೆ

ಮೃತರನ್ನು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್ (28) ವೇಣುಗೋಪಾಲ (38), ಮಂಜುನಾಥ (37), ಎಂದು ಗುರುತಿಸಲಾಗಿದೆ.

 ಗುರುವಾರ ರಾತ್ರಿ  ನಗರಗೆರೆ-ವಾಟದಹೊಸಹಳ್ಳಿ ರಸ್ತೆಯಲ್ಲಿ ವೇಣುಗೋಪಾಲ್ ತಮ್ಮ ಕಾರಿನಲ್ಲಿ ಬರುವಾಗ ಕಾರು ಆಯತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದಿದೆ. ಮೂವರು ಮೃತಪಟ್ಟಿದ್ದು, ಶಿವಕುಮಾರ್ ಎಂಬುವರು ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರಗೆ ರವಾನಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News