ಚಿಕ್ಕಬಳ್ಳಾಪುರ | ಬೈಕ್–ಶಾಲಾ ವಾಹನದ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು
ಚಿಕ್ಕಬಳ್ಳಾಪುರ : ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಬುರುಡಗುಂಟೆ ಸಮೀಪ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ಓರ್ವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆ.
ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹೋಗಲು ಚೇಳೂರು ತಾಲ್ಲೂಕಿನ ಚಿಲಕಲನೇರ್ಪು ಗ್ರಾಮದಿಂದ ಬೈಕ್‌ನಲ್ಲಿ ಹೊರಟಿದ್ದ ಬಾಲಾಜಿ, ವೆಂಕಟೇಶಪ್ಪ ಹಾಗೂ ಇಬ್ಬರು ಮಕ್ಕಳಾದ ಹರೀಶ್ ಮತ್ತು ಆರ್ಯ ಬುರುಡಗುಂಟೆ ಹತ್ತಿರ ಬಂದಾಗ ಎದುರುಗಡೆಯಿಂದ ಬಂದ ಶಾಲಾ ವಾಹನಕ್ಕೆ ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಹಿನ್ನೆಲೆ ಕೆಂಚಾರ್ಲಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.