×
Ad

ಬಿಜೆಪಿ ಸಂಸದ ಕೆ.ಸುಧಾಕರ್ ಹೆಸರು ಬರೆದಿಟ್ಟು ಜಿ.ಪಂ ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ

Update: 2025-08-07 13:12 IST

ಡಾ.ಕೆ.ಸುಧಾಕರ್/ಬಾಬು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ಕಾರು ಚಾಲಕ ಬಾಬು (33) ಎಂಬುವವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಡೆತ್ ನೋಟ್‌ನಲ್ಲಿ ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಮತ್ತು ಅವರ ಬೆಂಬಲಿಗರ ಹೆಸರು ಉಲ್ಲೇಖಿಸಿರುವುದು ಸಂಚಲನ ಮೂಡಿಸಿದೆ.

ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಬಾಬು, ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ.

'ಸುಧಾಕರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಕಾಯಂ ಸರಕಾರಿ ಕೆಲಸ ಕೊಡಿಸುತ್ತೇವೆ ಎಂದಿದ್ದರು. 40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ 25 ಲಕ್ಷ ನೀಡಿದ್ದೆ. ಆದರೆ ಕೆಲಸ ಮಾತ್ರ ಕೊಡಿಸಲಿಲ್ಲ' ಎಂದು ಡೆತ್ ನೋಟ್‌ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾನೂನು ಕ್ರಮ :

ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ. ಅವುಗಳಲ್ಲಿ ಸಂಸದ ಸುಧಾಕರ್ ಮೇಲೆ ಆರೋಪ ಮಾಡಿದ್ದಾರೆ. ಎಂಪಿ ಅವರ ಅನುಯಾಯಿ ನಾಗೇಶ್, ಮಂಜುನಾಥ್ ಕಾರಣ ಅಂತ ಪತ್ರ ಬರೆದಿದ್ದಾರೆ. ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಇದು ಗಂಭೀರ ಆರೋಪ. ಕೆಲಸ ಕೊಡಿಸೋದಾಗಿ ಹಣ ಪಡೆದಿದ್ದಾರೆ. ಇದು ಸಂಪೂರ್ಣ ತನಿಖೆ ಆಗಬೇಕು ಎಂದು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News