×
Ad

ಮಧ್ಯಪ್ರದೇಶ: ದಲಿತ ಯುವತಿ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

Update: 2023-11-28 08:28 IST

ಗ್ವಾಲಿಯರ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ 17 ವರ್ಷದ ಯುವತಿಯ ಮೇಲೆ ಯುವಕನೊಬ್ಬ ತನ್ನ ಇತರ ಮೂವರು ಸ್ನೇಹಿತರ ಜತೆಗೆ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ.

ಸಂತ್ರಸ್ತೆ ಯುವತಿ ದಲಿತ ಸಮುದಾಯಕ್ಕೆ ಸೇರಿರುವ ಹಿನ್ನೆಲೆಯಲ್ಲಿ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳಡಿ ಪ್ರಕರಣ ದಾಖಲಿಸಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎನ್ನಲಾಗುತ್ತಿದೆ.

ನವೆಂಬರ್ 21ರಂದು ಈ ಘಟನೆ ನಡೆದಿದೆ ಎನ್ನಲಾಗಿದ್ದು, ನಾಲ್ಕು ದಿನಗಳ ಬಳಿಕ ಯುವತಿ ದೂರು ನೀಡಿದ್ದಾಳೆ. ಈ ಘಟನೆಯನ್ನು ಬಹಿರಂಗಪಡಿಸದಂತೆ ಆರೋಪಿಗಳು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ದೂರು ನೀಡಲು ವಿಳಂಬವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಯುವತಿ ಹಾಗೂ ಆಕೆಯ ಕುಟುಂಬದವರು ದೂರು ನೀಡಿದ್ದನ್ನು ಹೆಚ್ಚುವರಿ ಎಸ್ಪಿ ನಿರಂಜನ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಈ ಯುವತಿ ಕಳೆದ ವರ್ಷ ಯುವಕನ ಜತೆಗೆ ಫೇಸ್ಬುಕ್ ನಲ್ಲಿ ಸ್ನೇಹ ಬೆಳೆಸಿದ್ದಳು. ನವೆಂಬರ್ 21ರಂದು ಆರೋಪಿ ನಿರ್ಜನ ಪ್ರದೇಶಕ್ಕೆ ಕಾರಿನಲ್ಲಿ ಕರೆದೊಯ್ದು ಇತರ ಮೂವರು ಸ್ನೇಹಿತರ ಜತೆಗೆ ಅತ್ಯಾಚಾರ ಎಸಗಿದ್ದಾನೆ. ಈ ಪೈಕಿ ಒಬ್ಬ ಆರೋಪಿ ಪ್ರಭಾವಿ ರಾಜಕಾರಣಿಯೊಬ್ಬರ ನಿಕಟ ಸಂಬಂಧಿ ಎಂದು ಪೊಲೀಸ್ ಮೂಲಗಳು ಹೇಳಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News