×
Ad

ಭಾರತೀಯ ಸೇನೆಯಲ್ಲಿ ಅಗ್ನಿವೀರ್ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನ

Update: 2026-02-15 19:13 IST

PC : PTI

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆ ಮತ್ತು ಮಾರ್ಗಸೂಚಿಗಳನ್ನು ಪರಿಶೀಲಿಸುವುದು ಅಗತ್ಯ.

ಭಾರತೀಯ ಸೇನೆಯು ಅಗ್ನಿಪಥ್ ಅಗ್ನಿವೀರ್‌ಗಳ ಹುದ್ದೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಸಿಇಇ ನೇಮಕಾತಿಗಾಗಿ ಅಧಿಕೃತ ವೆಬ್‌ತಾಣದಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಫೆಬ್ರವರಿ 13, 2026ರಂದು ಪ್ರಾರಂಭವಾಗಿದೆ ಮತ್ತು ಅಭ್ಯರ್ಥಿಗಳು 2026 ಏಪ್ರಿಲ್ 01ರವರೆಗೆ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಪ್ರವೇಶ ಪರೀಕ್ಷೆ (CEE) ಜೂನ್ 1ರಿಂದ 15ರ ನಡುವೆ ನಡೆಯಲಿದ್ದು, ಹುದ್ದೆವಾರು ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ವಿವರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ಮುಂದಿನ ಲಿಂಕ್ ಬಳಸಬಹುದು: https://joinindianarmy.nic.in/Authentication.aspx

ಪ್ರಮುಖ ದಿನಾಂಕಗಳು

* ಅಧಿಸೂಚನೆ ದಿನಾಂಕ: 13 ಫೆಬ್ರವರಿ 2026

* ಆನ್‌ಲೈನ್ ಅರ್ಜಿ ಆರಂಭ: 13 ಫೆಬ್ರವರಿ 2026

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಏಪ್ರಿಲ್ 2026

* ಶುಲ್ಕ ಪಾವತಿಗೆ ಕೊನೆಯ ದಿನಾಂಕ: 02 ಏಪ್ರಿಲ್ 2026

* ಪರೀಕ್ಷೆಯ ದಿನಾಂಕ: 01 - 16 ಜೂನ್ 2026

* ಅಡ್ಮಿಟ್ ಕಾರ್ಡ್: ಪರೀಕ್ಷೆಗೆ ಮೊದಲು

* ಫಲಿತಾಂಶದ ದಿನ: ಶೀಘ್ರವೇ ಅಪ್‌ಡೇಟ್ ಮಾಡಲಾಗುವುದು

* ವಿವರಗಳಿಗೆ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ತಾಣವನ್ನು ಪರೀಕ್ಷಿಸಿ ದೃಢಪಡಿಸಬಹುದು.

ಅರ್ಜಿ ಶುಲ್ಕ

ಜನರಲ್‌/ಒಬಿಸಿ/ಇಡಬ್ಲ್ಯುಎಸ್:250 ರೂ.

ಎಸ್‌ಸಿ/ಎಸ್‌ಟಿ/ ಪಿಡಬ್ಲ್ಯುಡಿ/ಮಹಿಳೆಯರು: 250 ರೂ.

ಪಾವತಿ ವಿಧಾನ: ಡೆಬಿಟ್ ಕಾರ್ಡ್‌, ಕ್ರೆಡಿಟ್ ಕಾರ್ಡ್, ಇಂಟರ್‌ನೆಟ್ ಬ್ಯಾಂಕಿಂಗ್, ಐಎಂಪಿಎಸ್‌, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್‌ ಮೂಲಕ ಪಾವತಿಸುವ ಅವಕಾಶವಿದೆ.

ಶೈಕ್ಷಣಿಕ ಅರ್ಹತೆ:

ಅಗ್ನಿವೀರ್ ಹುದ್ದೆಗಳ ಪ್ರಕಾರ ಶೈಕ್ಷಣಿಕ ಅರ್ಹತೆ ವಿಭಿನ್ನವಾಗಿರುತ್ತದೆ. ಅಗ್ನಿವೀರ್ ಜನರಲ್ ಡ್ಯೂಟಿ (GD) ಹುದ್ದೆಗೆ 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಕನಿಷ್ಠ ಶೇ.33 ಅಂಕಗಳೊಂದಿಗೆ ಒಟ್ಟು ಶೇ.45 ಅಂಕ ಅಗತ್ಯವಿದೆ. ಅಗ್ನಿವೀರ್ ತಾಂತ್ರಿಕ ಹುದ್ದೆಗೆ 12ನೇ ತರಗತಿಯಲ್ಲಿ ಭೌತಶಾಸ್ತ್ರ, ಗಣಿತ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಕನಿಷ್ಠ ಶೇ.50 ಅಂಕ ಇರಬೇಕು. ಕ್ಲರ್ಕ್/ಸ್ಟೋರ್‌ಕೀಪರ್ ಹುದ್ದೆಗೆ 12ನೇ ತರಗತಿಯಲ್ಲಿ ಒಟ್ಟು ಶೇ.60 ಅಂಕಗಳೊಂದಿಗೆ ಇಂಗ್ಲಿಷ್ ಮತ್ತು ಗಣಿತ ಅಥವಾ ಅಕೌಂಟ್ಸ್‌ನಲ್ಲಿ 50 ಅಂಕ ಅಗತ್ಯವಿದೆ. ಟ್ರೇಡ್ಸ್‌ಮನ್ ಹುದ್ದೆಗೆ 8ನೇ ಅಥವಾ 10ನೇ ತರಗತಿಯಲ್ಲಿ ಪ್ರತಿ ವಿಷಯದಲ್ಲಿ ಶೇ.33 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ಮಹಿಳಾ ಮಿಲಿಟರಿ ಪೊಲೀಸ್ (GD) ಹುದ್ದೆಗೆ 10ನೇ ತರಗತಿಯಲ್ಲಿ ಶೇ.45 ಅಂಕ ಅಗತ್ಯವಿದೆ. ಸೋಲ್ಜರ್ ಟೆಕ್ನಿಕಲ್ ನರ್ಸಿಂಗ್ ಸಹಾಯಕ ಹುದ್ದೆಗೆ 12ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಕನಿಷ್ಠ ಶೇ.50 ಅಂಕ ಇರಬೇಕು. ಸಿಪಾಯಿ ಫಾರ್ಮಾ ಹುದ್ದೆಗೆ ಡಿ ಫಾರ್ಮಾ (ಶೇ.55) ಅಥವಾ ಬಿ ಫಾರ್ಮಾ (ಶೇ.50) ಹಾಗೂ ಫಾರ್ಮಸಿ ಕೌನ್ಸಿಲ್‌ನಲ್ಲಿ ನೋಂದಣಿ ಅಗತ್ಯ. ಜೆಸಿಒ ಧಾರ್ಮಿಕ ಶಿಕ್ಷಕ ಹುದ್ದೆಗೆ ಸಂಬಂಧಿತ ಧರ್ಮ ಹಾಗೂ ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಅಗತ್ಯವಿದೆ.

ವಯೋಮಿತಿ

ಅಗ್ನಿವೀರ್ ಜಿಡಿ, ಟೆಕ್ನಿಕಲ್ ಮತ್ತು ಟ್ರೇಡ್ಸ್‌ಮನ್ ಹುದ್ದೆಗಳಿಗೆ 17.5 ರಿಂದ 22 ವರ್ಷ ವಯೋಮಿತಿ ನಿಗದಿಯಾಗಿದೆ. ಸೋಲ್ಜರ್ ಟೆಕ್ನಿಕಲ್ ಹುದ್ದೆಗಳಿಗೆ ಗರಿಷ್ಠ ವಯಸ್ಸು 23 ವರ್ಷಗಳು. ಸಿಪಾಯಿ ಫಾರ್ಮಾ ಹುದ್ದೆಗೆ 19ರಿಂದ 25 ವರ್ಷ, ಜೆಸಿಒ ಧಾರ್ಮಿಕ ಶಿಕ್ಷಕ ಹುದ್ದೆಗೆ 25ರಿಂದ 34 ವರ್ಷ ವಯಸ್ಸಿನ ಮಿತಿ ಇದೆ. ವಯಸ್ಸನ್ನು ಜುಲೈ 1, 2027ರಂತೆ ಲೆಕ್ಕ ಹಾಕಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹಲವು ಹಂತಗಳನ್ನು ಒಳಗೊಂಡಿದೆ. ಮೊದಲು ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (CEE) ನಡೆಯುತ್ತದೆ. ಬಳಿಕ ದೈಹಿಕ ಸದೃಢತಾ ಪರೀಕ್ಷೆ, ದೈಹಿಕ ಅಳತೆ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ಅಂತಿಮ ಮೆರಿಟ್ ಪಟ್ಟಿ ಪ್ರಕಟಿಸಲಾಗುತ್ತದೆ. ಸಾಮಾನ್ಯ ಹುದ್ದೆಗಳಿಗೆ ಕನಿಷ್ಠ ಎತ್ತರ 170 ಸೆಂ.ಮೀ ಅಗತ್ಯವಿದ್ದು, ಕ್ಲರ್ಕ್ ಹುದ್ದೆಗಳಿಗೆ 162 ಸೆಂ.ಮೀ ಎತ್ತರ ಬೇಕಾಗುತ್ತದೆ. ಎದೆಯ ಗಾತ್ರ 77 ಸೆಂ.ಮೀ ಮತ್ತು ಕನಿಷ್ಠ 5 ಸೆಂ.ಮೀ ವಿಸ್ತರಣೆ ಇರಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆ ಮತ್ತು ಮಾರ್ಗಸೂಚಿಗಳನ್ನು ಪರಿಶೀಲಿಸುವುದು ಅಗತ್ಯ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News