ಕೃಷಿ ಇಲಾಖೆ ನೇಮಕಾತಿ 2026; ಯಾರು ಅರ್ಜಿ ಸಲ್ಲಿಸಬಹುದು?

Update: 2026-06-04 20:21 IST

ಎಪ್ರಿಲ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು, ಇದೀಗ ಸರ್ಕಾರದ ಹೊಸ ಆದೇಶದನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಒಟ್ಟು 945 ಹುದ್ದೆಗಳಿಗೆ ಈ ಪ್ರಕಟಣೆ ನೀಡಲಾಗಿದೆ.

ಕರ್ನಾಟಕ ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಬಿ ವೃಂದದ ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ.

ಈ ಹಿಂದೆ ಎಪ್ರಿಲ್ 18ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದು, ಸರ್ಕಾರದ ಹೊಸ ಆದೇಶದನ್ವಯ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಒಟ್ಟು 945 ಹುದ್ದೆಗಳಿಗೆ ಹೊಸ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಥಮಾಡಿಕೊಂಡ ಬಳಿಕವೇ ಅರ್ಜಿ ಸಲ್ಲಿಸುವುದು ಸೂಕ್ತ.

► ಪ್ರಮುಖ ದಿನಾಂಕಗಳು

• ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 30, 2026

• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಜೂನ್ 20, 2026

• ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಜೂನ್ 22, 2026

►ಪ್ರಮುಖ ಲಿಂಕ್ಗಳು

• ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಕೆ: https://cetonline.karnataka.gov.in/kearecruitment2026app/login

• ಉಳಿಕೆ ವೃಂದಕ್ಕೆ ಅರ್ಜಿ ಸಲ್ಲಿಕೆ: https://cetonline.karnataka.gov.in/kearecruitment2026app/login

• ಅಧಿಕೃತ ವೆಬ್ಸೈಟ್: cetonline.karnataka.gov.in/kea/

►ಕರ್ನಾಟಕ ಕೃಷಿ ಇಲಾಖೆ ನೇಮಕಾತಿ ಹುದ್ದೆಗಳ ವಿವರ

ಹುದ್ದೆಯ ಹೆಸರು ಕಲ್ಯಾಣ ಕರ್ನಾಟಕ ವೃಂದ ಉಳಿಕೆ ವೃಂದ ಒಟ್ಟು ಹುದ್ದೆಗಳು

ಕೃಷಿ ಅಧಿಕಾರಿ 42 86 128

ಸಹಾಯಕ ಕೃಷಿ ಅಧಿಕಾರಿ 231 586 817

ಒಟ್ಟು 273 672 945

►ಶೈಕ್ಷಣಿಕ ಅರ್ಹತೆ

ಶೇ 85ರಷ್ಟು ಹುದ್ದೆಗಳಿಗೆ ಭಾರತದ ಕಾನೂನು ರೀತ್ಯಾ ಹಾಗೂ ಐಸಿಎಆರ್ (ICAR) ಅಥವಾ ಎಐಸಿಟಿಇ (AICTE) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ ಪದವಿ ಹೊಂದಿರಬೇಕು.

ಉಳಿದ ಶೇ 15ರಷ್ಟು ಹುದ್ದೆಗಳಿಗೆ ಬಿಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ), ಬಿಟೆಕ್ (ಆಹಾರ ತಂತ್ರಜ್ಞಾನ), ಬಿಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ), ಬಿಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ), ಬಿಟೆಕ್ (ಅಗ್ರಿಕಲ್ಚರಲ್ ಇಂಜಿನಿಯರಿಂಗ್) ಅಥವಾ ತತ್ಸಮಾನ ಪದವಿ ಪಡೆದಿರಬೇಕು.

► ವೇತನ ಶ್ರೇಣಿ

• ಕೃಷಿ ಅಧಿಕಾರಿ ಹುದ್ದೆಗಳಿಗೆ: 69,250 ರೂ. ಯಿಂದ 1,34,200 ರೂ.

• ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ: 65,950 ರೂ.ಯಿಂದ 1,24,900 ರೂ.

►ವಯೋಮಿತಿ

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಸರ್ಕಾರದ ಆದೇಶದನ್ವಯ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ.

ಇದರನ್ವಯ ಸಡಿಲಿಕೆಯ ನಂತರದ ಗರಿಷ್ಠ ವಯೋಮಿತಿ:

• ಸಾಮಾನ್ಯ ಅಭ್ಯರ್ಥಿಗಳು: 40 ವರ್ಷ

• ಒಬಿಸಿ ಅಭ್ಯರ್ಥಿಗಳು: 43 ವರ್ಷ

• ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳು: 45 ವರ್ಷ

ಪಿಡಬ್ಲ್ಯುಡಿ ಮತ್ತು ವಿಧವೆ ಅಭ್ಯರ್ಥಿಗಳಿಗೆ 10 ವರ್ಷಗಳ ಹೆಚ್ಚುವರಿ ಸಡಿಲಿಕೆ ಇರುತ್ತದೆ.

ಮಾಜಿ ಸೈನಿಕರಿಗೆ: ಸೇವೆ ಸಲ್ಲಿಸಿದ ಅವಧಿಗೆ ಹೆಚ್ಚುವರಿಯಾಗಿ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

► ಅರ್ಜಿ ಶುಲ್ಕ ಮತ್ತು ಪಾವತಿ ವಿಧಾನ

• ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ (2ಎ, 2ಬಿ, 3ಎ, 3ಬಿ) ಅಭ್ಯರ್ಥಿಗಳಿಗೆ: 750 ರೂ.

• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯಲಿಂಗಿ ಅಭ್ಯರ್ಥಿಗಳಿಗೆ: 500 ರೂ.

• ವಿಶೇಷ ಚೇತನ ಅಭ್ಯರ್ಥಿಗಳಿಗೆ: 250 ರೂ.

ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಯುಪಿಐ ಅಥವಾ ಗೂಗಲ್ ಪೇ ಮೂಲಕ ಆನ್ಲೈನ್ನಲ್ಲಿ ಮಾತ್ರ ಪಾವತಿಸಬೇಕು. ಇತರೆ ಯಾವುದೇ ವಿಧಾನದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News