×
Ad

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣಕ್ಕೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

Update: 2025-11-05 23:01 IST

ಮಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ ಕೋರ್ಸ್‌ಗಳಿಗೆ ರೂ.50,000 - ರೂ.5,00,000ದವರೆಗೆ ನೀಡಲಾಗುತ್ತದೆ.

ನಿಗಮದ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‌ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವಾಗ ನಿಗಮದಿಂದ ಈ ಹಿಂದಿನ ವರ್ಷದಲ್ಲಿ ಪಡೆದಿರುವ ಸಾಲದ ಮೊತ್ತದ ಶೇ 12% ರಷ್ಟು ಆನ್‌ಲೈನ್ ಮುಖಾಂತರ ಮಾತ್ರ ಪಾವತಿಸಬೇಕಾಗಿರುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗಿದ್ದು ಬೇರೆ ಬೇರೆ ವರ್ಷಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರಿವು ಸಾಲ ಪಡೆಯದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ನಗರದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ 8277799990 ಮತ್ತು ನಿಗಮದ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News