×
Ad

ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Update: 2023-06-27 19:29 IST

ಫೋಟೋ- ANI

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದೆ.

ಮಮತಾ ಬ್ಯಾನರ್ಜಿ ಅವರು ಜಲ್ಪೈಗುರಿಯಲ್ಲಿ ಚುನಾವಣಾ ರ್ಯಾಲಿ ಮುಗಿಸಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಮಮತಾ ಬ್ಯಾನರ್ಜಿ ಬಾಗ್ದೋಗ್ರಾ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಬೈಕುಂತಪುರ ಅರಣ್ಯ ಪ್ರದೇಶಕ್ಕೆ ತಲುಪಿದಾಗ ಹೆಲಿಕಾಪ್ಟರ್ ಕೆಟ್ಟ ಹವಾಮಾನವನ್ನು ಎದುರಿಸಿದೆ. ತಕ್ಷಣವೇ ಸಿಲಿಗುರಿ ಸಮೀಪದ ಸೆವೋಕ್ ವಾಯುನೆಲೆಯಲ್ಲಿ ಹೆಲಿಕಾಪ್ಟರ್‌ ಅನ್ನು ಸುರಕ್ಷಿತವಾಗಿ ಲ್ಯಾಂಡ್‌ ಮಾಡಲಾಗಿದೆ.

ಭಾರೀ ಮಳೆಯಾಗುತ್ತಿದ್ದುದರಿಂದ ಪೈಲಟ್ ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿಯೊಬ್ಬರು PTI ಗೆ ತಿಳಿಸಿದ್ದಾರೆ.

ಘಟನೆಯ ನಂತರ, ಮಮತಾ ಬ್ಯಾನರ್ಜಿ ಅವರು ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆಯ ಮೂಲಕ ಪ್ರಯಾಣಿಸಿಸಲು ನಿರ್ಧರಿಸಲಾಯಿತು ಎಂದು ಅವರು ಹೇಳಿದ್ದಾರೆ.

ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಯ ಪ್ರಚಾರಕ್ಕಾಗಿ ಬ್ಯಾನರ್ಜಿ ಉತ್ತರ ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಪ್ರವಾಸ ಮಾಡುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News