×
Ad

ಮಂಡ್ಯ: ಸರಕಾರಿ ಗೌರವದೊಂದಿಗೆ ಯೋಧನ ಅಂತ್ಯಕ್ರಿಯೆ

Update: 2026-01-14 23:20 IST

ಮಂಡ್ಯ : ಕರ್ತವ್ಯದ ವೇಳೆ ಹೃದಯಾಘಾತದಿಂದ ಮೃತಪಟ್ಟ ನಗರದ ತಾವರೆಗೆರೆ ಬಡಾವಣೆಯ ನಿವಾಸಿ ಯೋಧ ಎಂ.ಬಿ.ಮಾದೇಗೌಡ(44) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರಕಾರಿ ಗೌರವದೊಂದಿಗೆ ಬುಧವಾರ ನಗರದ ಹೊರವಲಯದ ಸ್ಮಶಾನದಲ್ಲಿ ನೆರವೇರಿಸಲಾಯಿತು.

ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್‌ನ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾದೇಗೌಡ, ತೀವ್ರ ಹೃದಯಾಘಾತದಿಂದ ಮಂಗಳವಾರ ಮೃತಪಟ್ಟಿದ್ದು, ಬುಧವಾರ ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ನಗರಕ್ಕೆ ತರಲಾಯಿತು.

ಮಂಡ್ಯಕ್ಕೆ ಆಗಮಿಸಿದ ಮೃತ ಯೋಧನ ಪಾರ್ಥಿವ ಶರೀರಕ್ಕೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಪೊಲೀಸರು ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಶಾಸಕ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾರಾಣಿ ಪುಷ್ಪಗುಚ್ಚವಿಟ್ಟು ನಮನ ಸಲ್ಲಿಸಿದರು.

ನಂತರ ಯೋಧನ ಕುಟುಂಬದವರಿಗೆ ಪ್ರಾರ್ಥಿವ ಶರೀರವನ್ನು ಹಸ್ತಾಂತರಿಸಲಾಯಿತು. ವಿಧಿವಿಧಾನಗಳ ನಂತರ, ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಮೃತರ ಪತ್ನಿ ಶಿಲ್ಪಾ, ಪುತ್ರಿ, ಪುತ್ರ ಹಾಗೂ ಕುಟುಂಬದವರಿಗೆ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ ಸಾಂತ್ವನ ಹೇಳಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News