×
Ad

ಆರೆಸ್ಸೆಸ್ ನೋಂದಣಿಗೆ ಪ್ರಗತಿಪರ ಸಂಘಟನೆಗಳ ಆಗ್ರಹ; ಧರಣಿ ಮೂಲಕ ಕೇಂದ್ರಕ್ಕೆ ಮನವಿ ಪತ್ರ

Update: 2026-06-25 23:11 IST

ಮಂಡ್ಯ : ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರೆಸ್ಸೆಸ್)ವನ್ನು ನೋಂದಾಯಿಸಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಧರಣಿ ನಡೆಸಿ, ಜಿಲ್ಲಾಧಿಕಾರಿ ಮೂಲಕ ಕೇಂದ್ರ ಗೃಹ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾವಣೆಗೊಂಡ ಮುಖಂಡರು, ಕೇಂದ್ರ ಸರಕಾರ ಮತ್ತು ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂವಿಧಾನಕ್ಕಿಂತ ಆರೆಸ್ಸೆಸ್ ದೊಡ್ಡದೇನಲ್ಲ. ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ನೀಡಿರುವ ಝಡ್ ಪ್ಲಸ್ ಭದ್ರತೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ತಾಕೀತು ಮಾಡಿದರು.

ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಆರೆಸ್ಸೆಸ್ ನೋಂದಣಿ ಕುರಿತಂತೆ ಕೇಂದ್ರಕ್ಕೆ ಬರೆದಿರುವ ಪತ್ರವು ಸಂವಿಧಾನಾತ್ಮಕವೂ, ನೈತಿಕವೂ ಆಗಿರುವುದರಲ್ಲಿ ಸಂಶಯವಿಲ್ಲ. ಈ ಕುರಿತಂತೆ ಹಲವು ಬಗೆಯ ಚರ್ಚೆಗಳು ಮಾಧ್ಯಮಗಳಲ್ಲಿ, ಸಾರ್ವಜನಿಕರಲ್ಲಿ ನಡೆಯುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಮುಖಂಡರು ಹೇಳಿದರು.

ಧರಣಿಯಲ್ಲಿ ಭಾರತೀಯ ವಕೀಲರ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಟಿ.ವಿಶ್ವನಾಥ್, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಚಿಂತಕರಾದ ಪ್ರೊ.ಹುಲ್ಕೆರೆ ಮಹದೇವು, ಪ್ರೊ.ಜಿ.ಟಿ.ವೀರಪ್ಪ, ಷಣ್ಮುಖೇಗೌಡ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸಿ.ಕುಮಾರಿ, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ದಸಂಸ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ, ಜನಶಕ್ತಿಯ ಸಿದ್ದರಾಜು, ಭಾರತೀಯ ಬೌದ್ಧ ಮಹಾಸಭಾದ ಶಿವರಾಜು, ನಾರಾಯಣಸ್ವಾಮಿ, ನಿವೃತ್ತ ಪ್ರಾಧ್ಯಾಪಕ ಪಿ.ಡಿ.ತಿಮ್ಮಪ್ಪ, ಆಟೋ ಚಾಲಕರ ಸಂಘದ ಅಧ್ಯಕ್ಷ ಕೃಷ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಸಿ.ಎಂ.ದ್ಯಾವಪ್ಪ, ಸುಂಡಹಳ್ಳಿ ಮಂಜುನಾಥ್, ಕಾಗೇಹಳ್ಳದೊಡ್ಡಿ ರಾಮಕೃಷ್ಣ, ದೀಪಕ್ ಮಂಡ್ಯ, ಉಮ್ಮಡಹಳ್ಳಿ ನಾಗೇಶ್, ಟಿ.ಡಿ.ನಾಗರಾಜು, ಟಿ.ಡಿ.ಬಸವರಾಜು, ರಮಾನಂದ ತರೀಕೆರೆ, ಹುರಗಲವಾಡಿ ರಾಮಯ್ಯ, ಎಂ.ಸಿ.ಯೋಗಾನಂದ ಮರಳಿಗ, ಇತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News