×
Ad

ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ: ಎನ್.ಚಲುವರಾಯಸ್ವಾಮಿ

Update: 2025-11-05 15:34 IST

ಮಂಡ್ಯ: ಮಂಗಳವಾರ ಬೆಳಗ್ಗೆ ನಗರದ ಕಾವೇರಿ ಉದ್ಯಾನವನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕೆ.ಆರ್.ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ಮಂಜೇಗೌಡ(55) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಮೃತ ರೈತನ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಜೊತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮಂಜೇಗೌಡರ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಒಡೆತನಕ್ಕೆ ಸೇರದಿದ್ದರೆ ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾದರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News