×
Ad

ಕೇಂದ್ರ ಸರಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ

Update: 2025-05-08 15:51 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ : ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

 ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್‌ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ದೇವಾಲಯಗಳಲ್ಲಿ ಪೂಜೆ :

ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಪೂಜೆ ಮಾಡುವ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಯವರೊಂದಿಗೆ ಮಾತನಾಡಿ ಕ್ರಮ ತೆಗೆದುಕೊಂಡಿದ್ದಾರೆ ಎಂದರು.

ರಾಜ್ಯದಿಂದ ಪಾಕಿಸ್ತಾನದ ಪ್ರಜೆಗಳು ಬಹತೇಕ ಗಡೀಪಾರಾಗಿದ್ದಾರೆ :

ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News