×
Ad

Mandya | ನೇಣುಬಿಗಿದುಕೊಂಡು ದಂಪತಿ ಆತ್ಮಹತ್ಯೆ

Update: 2026-03-09 20:05 IST

ಮಂಡ್ಯ : ದಂಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ವರ್ಷದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ಜಯನಗರ ಬಡಾವಣೆಯಲ್ಲಿ ಸೋಮವಾರ ನಡೆದಿರುವುದು ವರದಿಯಾಗಿದೆ.

ಜಯನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೆ.ಆರ್.ಪೇಟೆ ತಾಲೂಕು ಹೊಸಕೋಟೆ ಗ್ರಾಮದ  ದರ್ಶನ್(29) ಮತ್ತು ಪತ್ನಿ ದಿವ್ಯಶ್ರೀ(25) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ.

ದರ್ಶನ್ ಕೃಷಿ ಜತೆಗೆ ಕಾರು ಚಾಲಕ ವೃತ್ತಿ ಮಾಡುತ್ತಿದ್ದು, ಪತ್ನಿ ದಿವ್ಯ ಪ್ಯಾರಾಮೆಡಿಕಲ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ದಂಪತಿ ಎರಡು ವರ್ಷದ ಹೆಣ್ಣು ಮಗುವನ್ನು ಹತ್ಯೆಗೈಯಲು ಯತ್ನಿಸಿದ್ದು, ಮಗು ಬದುಕುಳಿದಿದೆ ಎನ್ನಲಾಗಿದೆ.

ಕೆ.ಆರ್.ಪೇಟೆ ತಾಲೂಕು ನಾಟನಹಳ್ಳಿಯ ದಿವ್ಯ ಅವರನ್ನು ಮೂರು ವರ್ಷದ ಹಿಂದೆ ಹೊಸಕೋಟೆಯ ದರ್ಶನ್ ಜತೆ ವಿವಾಹ ಮಾಡಿಕೊಡಲಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ದರ್ಶನ್ ತಂದೆ ದೂರು ನೀಡಿದ್ದು, ಈ ಸಂಬಂಧ ಕೆ.ಆರ್.ಪೇಟೆ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News