ಮಂಡ್ಯ: ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ಮೃತ್ಯು
Update: 2025-09-05 22:46 IST
ಮಂಡ್ಯ: ಎಮ್ಮೆ ತೊಳೆಯುವ ವೇಳೆ ಬಾವಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಅರೆಬೊಪ್ಪನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ಗ್ರಾಮದ ವಸಂತಮ್ಮ(65) ಹಾಗು ಕಾಳೇಗೌಡ(70) ಬಾವಿಗೆ ಬಿದ್ದು ಸಾವನ್ನಪ್ಪಿದ ದಂಪತಿ ಎಂದು ತಿಳಿದುಬಂದಿದೆ.
ಎಮ್ಮೆ ತೊಳೆಯಲು ಹೋಗಿದ್ದ ವೇಳೆ ತೆರದ ಬಾವಿಗೆ ಬಿದ್ದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಕೂಡ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.