×
Ad

ಸಾಮಾಜಿಕ ಸಾಮರಸ್ಯಕ್ಕೆ ಅಧ್ಯಾತ್ಮದ ಮಾರ್ಗದರ್ಶನ ಅತ್ಯಗತ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು

ಸುತ್ತೂರು ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವಕ್ಕೆ ಚಾಲನೆ

Update: 2025-12-17 00:57 IST

ಮಳವಳ್ಳಿ : ತ್ವರಿತ ಬದಲಾವಣೆ ಮತ್ತು ಅನಿಶ್ಚಿತತೆಯ ಈ ಕಾಲಘಟ್ಟದಲ್ಲಿ ಸಾಮಾಜಿಕ ಸಾಮರಸ್ಯ, ನೈತಿಕ ನಾಯಕತ್ವ, ಯುವ ಸಬಲೀಕರಣ ಮತ್ತು ಆಂತರಿಕ ಸ್ಥಿತಿಸ್ಥಾಪಕತ್ವವನ್ನು ಪೋಷಿಸಲು ಆಧ್ಯಾತ್ಮಿಕ ಮಾರ್ಗದರ್ಶನ ಅತ್ಯಗತ್ಯ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟಿದ್ದಾರೆ.

ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1,066ನೇ ಜಯಂತಿ ಮಹೋತ್ಸವಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಯುವಕರು ದೇಶದ ದೊಡ್ಡ ಶಕ್ತಿ. ಅವರ ಶಕ್ತಿ, ಸೃಜನಶೀಲತೆ, ಮೌಲ್ಯಗಳು ಸಮಾಜದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದರು.

ಸುಸ್ಥಿರ ಅಭಿವೃದ್ಧಿಯ ಪಥಕ್ಕೆ ಸುತ್ತೂರು ಮಠವು ಆಧಾರಸ್ತಂಭದಂತೆ ನಿಂತಿದೆ. ಶ್ರೀಮಠ ಗ್ರಾಮೀಣ ಬಡ ಜನರಿಗೆ ಶಿಕ್ಷಣ, ಆರೋಗ್ಯ ಸೇವೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದೆ. ಯುವ ಮನಸ್ಸುಗಳನ್ನು ಪ್ರೇರೇಪಿಸುವುದನ್ನು ಜವಾಬ್ದಾರಿಯುತ ನಾಗರಿಕರನ್ನು ಪೋಷಿಸುವುದನ್ನು ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು.

ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಮಾತನಾಡಿದರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಸುತ್ತೂರು ಮಠದ ಡಾ.ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ, ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಇತರ ಗಣ್ಯರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News