×
Ad

ಜೆಡಿಎಸ್‌ನವರು ನನ್ನನ್ನು ಪ್ರಚಾರಕ್ಕೆ ಕರೆದಿಲ್ಲ ಎಂದ ಸುಮಲತಾ ಹೇಳಿಕೆಗೆ ಎಚ್‌ಡಿಕೆ ಪ್ರತಿಕ್ರಿಯಿಸಿದ್ದು ಹೀಗೆ..

Update: 2024-04-26 16:56 IST

Photo : x/@hd_kumaraswamy

ಮಂಡ್ಯ : ನಾನು ಸುಮಲತಾ ಅವರ ಮನೆ ಬಾಗಿಲಿಗೇ ಹೋಗಿ ಸಹಕಾರ ಕೇಳಿದ್ದೇನೆ, ಇದಕ್ಕಿಂತ ಇನ್ನೇನು ಮಾಡಬೇಕು? ಎಂದು ಸಂಸದೆ ಸುಮಲತಾ ಅವರ ಹೇಳಿಕೆಗೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಜೆಡಿಎಸ್‌ ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ ಎಂಬ ಸುಮಲತಾ ಹೇಳಿಕೆ ಸಂಬಂಧ ಮದ್ದೂರಿನ ಕೆ.ಹೊನ್ನಲಗೆರೆ ಗ್ರಾಮದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು‌, ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು ಎರಡು ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ ಎಂದರು.

ಸುಮಲತಾ ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರು ಆ ರೀತಿ ಯಾಕೆ ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ದೇವೇಗೌಡರಿಗೆ ಮಾಹಿತಿ ಕೊರತೆ ಇರಬೇಕು ಅನಿಸುತ್ತೆ ಎಂದರು.

ಪಕ್ಷಭೇದ ಮರೆತು ಕಾಂಗ್ರೆಸ್, ಬಿಜೆಪಿಯವ ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರು ವಿರೋಧ ಮಾಡಿಲ್ಲ. ಬೆಂಗಳೂರಿನಿಂದ ಬಂದು ಸುಮಲತಾ ಅವರೂ ನನಗೇ ಮತ ಹಾಕಿದ್ದಾರೆ. ಅಂಬರೀಷ್ ಅಭಿಮಾನಿಗಳು ಮತ ಹಾಕಿದ್ದಾರೆ. ಅತ್ಯಂತ ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News