×
Ad

ಮಂಡ್ಯದಲ್ಲಿ ಭೀಕರ ಅಪಘಾತ : ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Update: 2024-12-21 21:27 IST

ಮಂಡ್ಯ : ಕಾರಿಗೆ ಲಾರಿ ಢಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ ಶನಿವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಚಿತ್ರದುರ್ಗ ಮೂಲದವರಾದ ಆಕಾಶ್, ಶಶಾಂಕ್ ಹಾಗೂ ಆದರ್ಶ ಮೃತಪಟ್ಟವರು. ಇವರು ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ತಲಕಾಡಿಗೆ ಕಾರಿನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ನಾಗೇಗೌಡನದೊಡ್ಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದಾಗ ಸಾರಿಗೆ ಬಸ್ಸನ್ನು ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಕಾರು ಢಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ಪೃಥ್ವಿ ಎಂಬ ವಿದ್ಯಾರ್ಥಿಯನ್ನು ಮಳವಳ್ಳಿ ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News