×
Ad

ಮಂಡ್ಯ ಕ್ಷೇತ್ರಕ್ಕೆ ಕುಮಾರಸ್ವಾಮಿ ಅವರು ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ : ಜೆಡಿಎಸ್‌ ನಾಯಕ ಸಿ.ಎಸ್ ಪುಟ್ಟರಾಜು

Update: 2024-03-21 12:56 IST

ಮಂಡ್ಯ: ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರೇ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಲಿದ್ದು, ನಾನೇ ಚುನಾವಣೆಯ ನೇತೃತ್ವ ವಹಿಸುತ್ತೇನೆ. ಅತ್ಯಂತ ಪ್ರಚಂಡ ಬಹುಮತದಲ್ಲಿ ಅವರನ್ನು ಗೆಲ್ಲಿಸುತ್ತೇವೆ ಎಂದು ಮಾಜಿ ಸಚಿವ ಸಿ.ಎಸ್ ಪುಟ್ಟರಾಜು ತಿಳಿಸಿದ್ದಾರೆ.

ಗುರುವಾರ ಪಾಂಡವಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ಅಷ್ಟೇ ಬರಲಿ ಅಂತಾ ಹೇಳಿದ್ದೇವೆ. ನಾವೇ ಓಡಾಡಿ ಗೆಲ್ಲಿಸುತ್ತೇವೆ. ಇಂದು ಚೆನ್ನೈನಲ್ಲಿ ಕುಮಾರಸ್ವಾಮಿಯವರ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಮೂರ್ನಾಲ್ಕು ದಿನದಲ್ಲಿ ರಾಜ್ಯಕ್ಕೆ ಬರಲಿದ್ದಾರೆ. ಮಂಡ್ಯ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

ಮೈತ್ರಿಯಲ್ಲಿರುವ ಸಣ್ಣ ಪುಟ್ಟ ಗೊಂದಲಗಳನ್ನು ಬಗೆಹರಿಸಿಕೊಳ್ಳುತ್ತೇವೆ.

ನಾಳೆ ಬಿಜೆಪಿ ಹೈಕಮಾಂಡ್ ಜೆಡಿಎಸ್‌ಗೆ ಯಾವ ಕ್ಷೇತ್ರಗಳು ಎಂದು ಅಧಿಕೃತವಾಗಿ ಹೇಳುತ್ತೆ. ಟಿಕೆಟ್ ಘೋಷಣೆ ಬಳಿಕ ಸುಮಲತಾ ಅವರೊಂದಿಗೂ ಮಾತಾನಾಡುತ್ತೇವೆ. ಅವರು ಹೇಗೆ ನಡೆದುಕೊಳ್ಳಬೇಕು, ನಾವು ಹೇಗೆ ನಡೆದುಕೊಳ್ಳಬೇಕು ಎಂದು ರಾಷ್ಟ್ರ ನಾಯಕರು ಹೇಳುತ್ತಾರೆ. ಎಲ್ಲರೂ ಒಗ್ಗಟ್ಟನಿಂದ ಹೋಗುತ್ತೇವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News