×
Ad

ಮದ್ದೂರು ಕಲ್ಲು ತೂರಾಟ | ಮಂಡ್ಯ ಎಸ್‌ಪಿ ಹೇಳಿದ್ದೇನು?

"ಎರಡು ಪ್ರಕರಣ ದಾಖಲು, 21 ಜನರ ಬಂಧನ"

Update: 2025-09-08 13:03 IST

ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಘಟನೆಗೆ  ಸಂಬಂಧಿಸಿದಂತೆ 21 ಜನರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಹೇಳಿದ್ದಾರೆ.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ತಮಿಳು ಕಾಲನಿಯಿಂದ ಹೊರಟ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಹತ್ತಿರದ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದು, ಕರೆಂಟ್ ಕೂಡ ಆಫ್ ಆಯಿತು ಎಂದು ಹೇಳಲಾಗಿದೆ. ಇದರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಘಟನೆ ವೇಳೆ ಸ್ಥಳದಲ್ಲಿದ್ದ  ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ, ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, 21 ಜನರನ್ನು ಬಂಧಿಸಲಾಗಿದೆ. ಅಲ್ಲದೆ, ಇನ್ನೂ ಕೆಲವು ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ. ಕೃತ್ಯದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News