×
Ad

ಮಂಡ್ಯ | ಕೆಆರ್‌ಎಸ್‍ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

Update: 2024-07-25 20:53 IST

ಕೆಆರ್‌ಎಸ್‍ ಜಲಾಶಯ

ಮಂಡ್ಯ: ಕೃಷ್ಣರಾಜಸಾಗರ ಜಲಾಶಯ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ ನದಿಗೆ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದ್ದು, ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಈಗಾಗಲೇ ಜಲಾಶಯದ ಗರಿಷ್ಠಮಟ್ಟ 124.80 ಅಡಿಗೆ ನೀರು ತಲುಪಿದೆ. ಜಲಾಶಯಕ್ಕೆ ಸುಮಾರು ಒಂದು ಲಕ್ಷ ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಎಲ್ಲವನ್ನೂ ನದಿಗೆ ಬಿಡುಗಡೆ ಮಾಡಲಾಗಿದೆ. ಈ ಪ್ರಮಾಣ ಒಂದೂವರೆ ಲಕ್ಷ ಕ್ಯೂಸೆಕ್‍ವರೆಗೂ ಹೆಚ್ಚಾಗಬಹುದು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾವೇರಿ ನದಿಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು, ರೈತರು ತಮ್ಮ ಆಸ್ತಿಪಾಸ್ತಿ, ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ.ಕುಮಾರ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News