×
Ad

ಮಂಡ್ಯ | ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ಯುವಕರು ನೀರು ಪಾಲು

Update: 2024-06-13 19:09 IST

ಸಾಂದರ್ಭಿಕ ಚಿತ್ರ

ಮಂಡ್ಯ : ಕಾವೇರಿ ನದಿಗೆ ಈಜಲು ಇಳಿದಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗಂಜಾಂ ಸಮೀಪ ಗುರುವಾರ ಮಧ್ಯಾಹ್ನ ನಡೆದಿದೆ.

ಮನೆಯವರ ಜತೆ ದೇವಸ್ಥಾನಕ್ಕೆ ಬಂದಿದ್ದ ತಮಿಳುನಾಡು ಮೂಲದ ವಿಶಾಲ್(19) ಹಾಗೂ ರೋಹನ್(17) ಎಂಬುವರು ನೀರು ಪಾಲಾದವರು ಎಂದು ವರದಿಯಾಗಿದೆ.

ಮೈಸೂರಿನ ತಮ್ಮ ಅಜ್ಜಿ ಮನೆಗೆ ಬಂದಿದ್ದ ರೋಹನ್ ಮತ್ತು ವಿಶಾಲ್, ಕುಟುಂಬದವರ ಜತೆ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಬಂದಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇಬ್ಬರು ಯುವಕರು ಕಾವೇರಿ ನದಿಯಲ್ಲಿ ಈಜುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಶ್ರೀರಂಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News