×
Ad

ಮಂಡ್ಯ | ಕಾರು-ಲಾರಿ ನಡುವೆ ಮುಖಾಮುಖಿ ಢಿಕ್ಕಿ : ಮೂವರು ಮೃತ್ಯು

Update: 2024-07-11 17:57 IST

ಮಂಡ್ಯ/ನಾಗಮಂಗಲ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಢಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಚಾಮರಾಜನಗರ-ಜೀವರ್ಗಿ ರಾಜ್ಯ ಹೆದ್ದಾರಿಯ ಶ್ರೀರಾಮನಹಳ್ಳಿ ಬಳಿ ಗುರುವಾರ ನಡೆದಿದೆ.

ಮೃತರನ್ನು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅರಸನಘಟ್ಟ ಗ್ರಾಮದ ಯುವರಾಜ್(47), ಸಿದ್ದೇಶ್(37) ಹಾಗೂ ತಿಪ್ಪಣ್ಣ(57) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದರ್ಶನಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ.

ಮೂವರು ತೆರಳುತ್ತಿದ್ದ ಕಾರಿಗೆ ಮೈಸೂರಿನಿಂದ ನಾಗಮಂಗಲ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿ ರಸ್ತೆಬದಿಯ ಕಂಬಕ್ಕೆ ಬಡಿದಿದೆ ಎಂದು ತಿಳಿದು ಬಂದಿದೆ.

ಮೃತದೇಹಗಳನ್ನು ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ಸಂಬಂಧಿಸಿದವರಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ನಾಗಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News