×
Ad

ಮಂಡ್ಯ | ಹೆದ್ದಾರಿಯಲ್ಲೇ ಹೊತ್ತಿ ಉರಿದ ಬಸ್: ಪ್ರಯಾಣಿಕರು ಪಾರು

Update: 2025-02-09 18:41 IST

ಮಂಡ್ಯ : ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಬಸ್ ಹೊತ್ತಿ ಉರಿದ ಘಟನೆ ರವಿವಾರ ಮುಂಜಾನೆ ನಗರದ ಹೊರವಲಯದ ಸ್ಯಾಂಜೋ ಆಸ್ಪತ್ರೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮಂಡ್ಯ-ಮೈಸೂರು ಮಾರ್ಗವಾಗಿ ಕಣ್ಣೂರಿಗೆ ತೆರಳುತ್ತಿದ್ದ ಖಾಸಗಿ ಬಸ್‍ನ ಇಂಜಿನ್‍ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಬಸ್ ಸಂಪೂರ್ಣ ಭಸ್ಮವಾಗಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News