ಸಾಂದರ್ಭಿಕ ಚಿತ್ರ


ನಾಗಮಂಗಲ : ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಅಂಗನವಾಡಿ ಕಾರ್ಯಕರ್ತೆಗೆ ಜಮೀನು ಸಂಬಂಧದ ಕೆಲಸ ಮಾಡಿಕೊಡುವುದಾಗಿ ಮನೆಗೆ ಕರೆಸಿಕೊಂಡು ಅಮಲಿನ ಪದಾರ್ಥ ಬೆರೆಸಿದ ಜೂಸ್ ಕುಡಿಸಿ ಅತ್ಯಾಚಾರ ಎಸಗಿ ಖಾಸಗಿ ವೀಡಿಯೊ ಮಾಡಿಕೊಂಡು ಬ್ಲ್ಯಾಕ್ ಮೇಲ್ ಮಾಡಿ ಆರು ವರ್ಷಗಳಿಂದ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಗ್ರಾಮ ಲೆಕ್ಕಾಧಿಕಾರಿ ಜೈಲುಪಾಲಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಾಗಮಂಗಲ ತಾಲೂಕಿನ ಕದಬಹಳ್ಳಿ ವೃತ್ತದ ಗ್ರಾಮ ಆಡಳಿತಾಧಿಕಾರಿ ಎಂ.ಮರಿಸ್ವಾಮಿ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಸಂತ್ರಸ್ತೆ ನೀಡಿದ ದೂರಿನನ್ವಯ ಬೆಳ್ಳೂರು ಠಾಣೆ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಎಂ.ಮರಿಸ್ವಾಮಿಯನ್ನು ಬಂಧಿಸಿ ಮಂಡ್ಯ ಜೈಲಿಗೆ ಕಳುಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor