×
Ad

ಮಂಡ್ಯ | ಕಾವೇರಿ ನದಿಯಲ್ಲಿ ಈಜಲು ಹೋದ ತಂದೆ, ಮಗ ಸೇರಿ ನಾಲ್ವರು ನೀರುಪಾಲು

Update: 2024-03-26 16:57 IST

ಸಾಂದರ್ಭಿಕ ಚಿತ್ರ

ಮಂಡ್ಯ: ಮಳವಳ್ಳಿ ತಾಲೂಕು ಮುತ್ತತ್ತಿ ಬಳಿ ಕಾವೇರಿ ನದಿಯಲ್ಲಿ ಈಜಲು ಹೋಗಿ ತಂದೆ ಮಗ ಸೇರಿದಂತೆ ನಾಲ್ವರು ನೀರು ಪಾಲಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್(55), ನಾಗೇಶ್ ಅವರ ಪುತ್ರ ಭರತ್(17), ಗುರುಕುಮಾರ್(32) ಮತ್ತು ಮಹದೇವ(14) ನೀರು ಪಾಲಾಗಿದ್ದಾರೆ.

ಧಾರ್ಮಿಕ ಕಾರ್ಯಕ್ರಮಕ್ಕೆಂದು ಸುಮಾರು 50 ಜನರು ಬಸ್‌ನಲ್ಲಿ ಮುತ್ತತ್ತಿಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆದಿದೆ ಎಂದು ವರದಿಯಾಗಿದೆ.

ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News