ಮಂಡ್ಯ | ತೆರೆದ ಬಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಮೃತದೇಹ ಪತ್ತೆ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಅಘಲಯ- ದೊಡ್ಡಸೋಮನಹಳ್ಳಿ ತಿರುವಿನಲ್ಲಿರುವ ತೆರೆದ ಬಾವಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯ ಶವ ಶನಿವಾರ ಪತ್ತೆಯಾಗಿದೆ.
ವಿದ್ಯಾರ್ಥಿಯು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಹಳೆಸಿದ್ದರಹಳ್ಳಿ( ಎಮ್ಮೆದೊಡ್ಡಿ) ಗ್ರಾಮದ ಸಿದ್ದಪ್ಪ ಅವರ ಪುತ್ರ ಎಸ್. ಕರಣ್ (22). ಈತ ಹಾಸನ ಜಿಲ್ಲೆಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಎಂದು ತಿಳಿದು ಬಂದಿದೆ.
ಬಾವಿಯ ದಡದಲ್ಲಿ ಸುಮಾರು 3 ಲಕ್ಷ ಬೆಲೆ ಬಾಳುವ ಬೈಕ್, 50 ಸಾವಿರ ಬೆಲೆ ಬಾಳುವ ಮೊಬೈಲ್, ಕಾಲೇಜು ಬ್ಯಾಗ್ ದೊರೆತಿದ್ದು, ಯುವಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿಯ ಮುಖದ ಭಾಗಕ್ಕೆ ಗಾಯಗಳಾಗಿದ್ದು, ಸಾವಿನ ನಿಖರತೆಗೆ ಕಾರಣ ತಿಳಿಯುವ ಬಗ್ಗೆ ಕೆ.ಆರ್.ಪೇಟೆ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ಸುಮಾರಾಣಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಪೋಷಕರಿಗೆ ನೀಡಲಾಯಿತು.