×
Ad

Mandya |ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯ: ಮಗನ ಅಂಗಾಂಗ ದಾನ ಮಾಡಿದ ಪೋಷಕರು

Update: 2026-02-25 23:44 IST

ಮಂಡ್ಯ: ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ್ಡಿದ್ದ ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಯುವಕ ದರ್ಶನ್ ಅವರ ಅಂಗಾಂಗಗಳನ್ನು ದಾನಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಬೈಕ್‍ನಿಂದ ಬಿದ್ದು ದರ್ಶನ್ ಗಂಭೀರವಾಗಿ ಗಾಯಗೊಂಡಿದ್ದರು. ನಗರದ ಮಿಮ್ಸ್ ಜಿಲ್ಲಾಸ್ಪತ್ರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಮಿದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗುವುದಿಲ್ಲವೆಂದು ವೈದ್ಯರು ಹೇಳಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯ ನಿರ್ದೇಶಕಿ ಡಾ.ಎಸ್.ಟಿ.ಕಾವ್ಯ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಎಸ್.ದೀಪಕ್ ಮತ್ತಿವರ ವೈದ್ಯರ ತಂಡದ ಸಲಹೆ ಮೇರೆಗೆ ದರ್ಶನ್ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಮಂಗಳವಾರ ತಡರಾತ್ರಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡ, ದರ್ಶನ್ ಅವರ ಯಕೃತ್, ಮೂತ್ರಪಿಂಡಗಳನ್ನು ಅಗತ್ಯ ಇರುವ ರೋಗಿಗಳಿಗೆ ಅಳವಡಿಸಿದರು. ನಂತರ, ಬುಧವಾರ ಬೆಳಗ್ಗೆ ಪೋಷಕರಿಗೆ ಯುವಕನರ ಮೃತದೇಹವನ್ನು ಹಸ್ತಾಂತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News