Mandya | ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ: ಇಬ್ಬರು ಮೃತ್ಯು, 20 ಮಂದಿಗೆ ಗಾಯ

Update: 2026-08-20 11:02 IST

ಮಂಡ್ಯ: ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ಸೊಂದು ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿಯ ನಾಗಮಂಗಲ ತಾಲೂಕಿನ ನೆಲ್ಲಿಗೆರೆ ಕ್ರಾಸ್ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾವಿ.ಜೆ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.


 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News