×
Ad

ಮಂಡ್ಯ | ಕಾಲುವೆಗೆ ಉರುಳಿಬಿದ್ದ ಕಾರು: ಇಬ್ಬರು ಯುವಕರು ಮೃತ್ಯು

Update: 2024-03-12 12:43 IST

ಮಂಡ್ಯ, ಮಾ.12: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ನೀರಿಲ್ಲದೆ ಕಾಲುವೆಗೆ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಪಾಂಡವಪುರ ತಾಲೂಕಿನ ಅವ್ವೇರಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ

ಮೃತರನ್ನು ಪಾಂಡವಪುರ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಂದೀಶ್ (18) ಹಾಗೂ ಯೋಗಾನಂದ(20) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ಇವರು ಕಾರಿನಲ್ಲಿ ಸೇತುವೆ ಮೇಲೆ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ದೊಡ್ಡ ಕಾಲುವೆಗೆ ಈ ಹಿಂದೆಯೂ ಅನೇಕ ಮಂದಿ ಆಕಸ್ಮಿಕವಾಗಿ ಬಿದ್ದು ಸಾವು ನೋವು ಸಂಭವಿಸಿವೆ. ಕಾಲುವೆಗೆ ತಡೆಗೋಡೆ ನಿರ್ಮಿಸಲು ಅನೇಕ ವರ್ಷಗಳಿಂದ ಇಲ್ಲಿನ ಶಾಸಕರಿಗೆ ಗ್ರಾಮಸ್ಥರು ಮನವಿ ನೀಡಿದ್ದರೂ ಇದುವರೆಗೂ ಸೂಕ್ತ ಸ್ಪಂದನ ಸಿಕ್ಕಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News