×
Ad

ಮಂಡ್ಯ | ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು; ಮೂವರು ಮೃತ್ಯು

Update: 2025-02-03 15:16 IST

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಸೋಮವಾರ ಮಧ್ಯಾಹ್ನ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ.

ಘಟನೆಯಲ್ಲಿ ಮಂಡ್ಯ ನಗರದ ಹಾಲಹಳ್ಳಿ ಸ್ಲಂ ಬಡಾವಣೆಯ ನಿವಾಸಿಗಳಾದ ಕಾಜು, ಅಯಾಝ್‌ ಹಾಗೂ ನಯಾಝ್‌ ಮೃತಪಟ್ಟಿದ್ದು, ಓರ್ವ ಈಜಿ ದಡ ಸೇರಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದಲ್ಲಿ ತುಂಬಿ ಹರಿಯುತ್ತಿದ್ದ ವಿಶ್ವೇಶ್ವರಯ್ಯ ನಾಲೆಗೆ ಉರುಳಿ ಬಿದ್ದು ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು ಕಾರನ್ನು ಹೊರತೆಗೆಯುವಲ್ಲಿ ನಿರತರಾಗಿದ್ದಾರೆ. ಮೃತದೇಹಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News