ಮಂಡ್ಯ: ಕೆಆರ್ ಎಸ್ ಅಣೆಕಟ್ಟೆಗೆ ಡಿಸಿಎಂ ಡಿಕೆಶಿ ಭೇಟಿ
Update: 2024-07-22 11:27 IST
ಮಂಡ್ಯ, ಜು.22: ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಅಣೆಕಟ್ಟೆಗೆ ಸೋಮವಾರ ಭೇಟಿ ನೀಡಿ ನೀರಿನ ಸಂಗ್ರಹ, ಒಳಹರಿವು, ಹೊರಹರಿವು, ಅಣೆಕಟ್ಟೆ ಭದ್ರತೆ, ಬೃಂದಾವನ ಉದ್ಯಾನವನ ಅಭಿವೃದ್ಧಿ ಮತ್ತಿತರ ವಿಚಾರಗಳ ಬಗ್ಗೆ ಪರಿವೀಕ್ಷಣೆ ನಡೆಸಿ, ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಕದಲೂರು ಉದಯ್, ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕ ಚಂದ್ರಶೇಖರ್, ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಕುಮಾರ್, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.