×
Ad

ಮಂಡ್ಯ | ಇಂಜಿನಿಯರ್ ಆತ್ಮಹತ್ಯೆ

Update: 2024-12-14 11:29 IST

ಮಂಡ್ಯ: ನೀರಿನ ಟ್ಯಾಂಕ್ ಗೆ ನೇಣು ಬಿಗಿದುಕೊಂಡು ಯುವ ಇಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಕೆಸ್ತೂರು ಗ್ರಾಮ ನಿವಾಸಿ ಜ್ಞಾನೇಶ್(30) ಮೃತಪಟ್ಟ ಇಂಜಿನಿಯರ್.

ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ 'Work Pressure' ಎಂದು ಹಾಕಿಕೊಂಡಿದ್ದರೆನ್ನಲಾಗಿದೆ. ಕೆಲಸದ ಒತ್ತಡದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕೆಸ್ತೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News