ಮಂಡ್ಯ | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು
Update: 2025-11-04 13:22 IST
ರಮೇಶ್
ಮಳವಳ್ಳಿ : ವಿದ್ಯುತ್ ತಂತಿ ತಗುಲಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಸಾಗ್ಯ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸಾಗ್ಯ ಗ್ರಾಮದ ರಮೇಶ್ (42) ಎಂದು ಗುರುತಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ಜಮೀನಿಗೆ ತೆರಳಿದ್ದ ರಮೇಶ್ ತೋಟದಲ್ಲಿ ಬಿದ್ದಿದ್ದ ತೆಂಗಿನ ಗರಿಗಳನ್ನು ಒಂದೆಡೆ ಎತ್ತಿಹಾಕುವ ವೇಳೆ ಮೇಲೆ ಹಾದು ಹೋಗಿದ್ದ 11 ಕೆ ವಿ ವಿದ್ಯುತ್ ತಂತಿಗೆ ತೆಂಗಿನ ಗರಿ ತಗುಲಿ ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ವರದಿಯಾಗಿದೆ.
ಈ ಸಂಬಂಧ ಹಲಗೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.