ಮಂಡ್ಯ| ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ: ಪತಿ ಮೃತ್ಯು, ಪತ್ನಿ ಗಂಭೀರ
Update: 2025-11-23 22:01 IST
ಕೃಷ್ಣೇಗೌಡ
ಮಂಡ್ಯ: ಸಾರಿಗೆ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಪತಿ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆ.ಆರ್.ಪೇಟೆ ತಾಲೂಕು ಗಾಂಧಿನಗರ ಬಳಿ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ತಡರಾತ್ರಿ ನಡೆದಿರುವುದು ವರದಿಯಾಗಿದೆ.
ಕೆ.ಆರ್.ಪೇಟೆ ತಾಲೂಕಿನ ಕಸಬಾ ಹೋಬಳಿಯ ಕರೋಟಿ ಗ್ರಾಮದ ಕೃಷ್ಣೇಗೌಡ (69) ಮೃತಪಟ್ಟವರು. ಅವರ ಪತ್ನಿ ಯಶೋಧಮ್ಮ(58) ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ.
ಕೃಷ್ಣೆಗೌಡ ದಂಪತಿ ಕೆ.ಆರ್.ಪೇಟೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮೈಸೂರುನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಬೈಕ್ ಗೆ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣೇಗೌಡ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.