Mandya | ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರಸ್ತೆತಡೆ : ವಾಟಾಳ್ ಸಹಿತ ಹಲವರ ಬಂಧನ, ಬಿಡುಗಡೆ

Update: 2026-08-20 23:19 IST

ವಾಟಾಳ್‌ ನಾಗರಾಜ್‌

ಮಂಡ್ಯ, ಆ.20: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ. ಕನ್ನಡ ಸೇನೆ, ರೈತ ಸಂಘ ಸಂಘಟನೆಗಳ ಮುಖಂಡರು ಜೆ.ಸಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಹೆದ್ದಾರಿಯ ವೃತ್ತದಲ್ಲಿ ಕುಳಿತು ವಾಹನ ಸಂಚಾರಿಕ್ಕೆ ಅಡ್ಡಿಪಡಿಸಿದರು. ರಾಜ್ಯ ಸರಕಾರ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಮ್, ಬಿಜೆಪಿ ಮುಖಂಡ ಸಿ.ಟಿ.ಮಂಜುನಾಥ್, ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News