×
Ad

ಮಂಡ್ಯ | ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 21 ವರ್ಷ ಜೈಲು ವಿಧಿಸಿದ ನ್ಯಾಯಾಲಯ

Update: 2024-04-05 22:17 IST

ಸಾಂದರ್ಭಿಕ ಚಿತ್ರ

ಮಂಡ್ಯ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 21 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1,18,000 ರೂ. ದಂಡ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ನಾಗಜ್ಯೋತಿ.ಕೆ.ಎ. ತೀರ್ಪು ನೀಡಿದ್ದಾರೆ.

ತಮಿಳುನಾಡು ಮೂಲದ ಅಣ್ಣಾಮಲೈ ಅವರ ಮಗ ವೆಂಕಟೇಶ್ ಜೈಲು ಶಿಕ್ಷೆಗೆ ಗುರಿಯಾಗಿದ್ದು, 2020ರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಕೆ.ಆರ್.ಪೇಟೆ ತಾಲೂಕು, ಕೊಡಗಹಳ್ಳಿ ಗ್ರಾಮಕ್ಕೆ ಬೆಂಗಳೂರಿನಿಂದ ಸಾರಿಗೆ ಬಸ್‍ನಲ್ಲಿ ತೆರಳುತ್ತಿದ್ದಾಗ, ಸಹ ಪ್ರಯಾಣಿಕ ಆರೋಪಿ ವೆಂಕಟೇಶ್ ಪರಿಚಯ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಮಾರ್ಗಮಧ್ಯೆ ಆರೋಪಿ ವೆಂಕಟೇಶ್ ಬಾಲಕಿಯನ್ನು ನಾಗಮಂಗಲದಲ್ಲಿ ಬಸ್‍ನಿಂದ ಇಳಿಸಿಕೊಂಡು ಮತ್ತೆ ಬೆಂಗಳೂರಿಗೆ ಕರೆದುಕೊಂಡು ಹೋಗಿ ಮನೆ ಬಾಡಿಗೆ ಪಡೆದು ಮದುವೆ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ನಾಗಮಂಗಲ ಟೌನ್ ಠಾಣೆಯಲ್ಲಿ ಫೋಕ್ಸೋ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ವಿಶೇಷ ಸರಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ಸಂತ್ರಸ್ತೆ ಬಾಲಕಿ ಪರ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News