×
Ad

ಮಂಡ್ಯ| ಹೆಣ್ಣುಭ್ರೂಣ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

Update: 2024-09-09 23:57 IST

ಬಂಧಿತ ಆರೋಪಿಗಳು

ಮಂಡ್ಯ: ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಮೈಸೂರಿನ ರಾಘವೇಂದ್ರ ಬಡಾವಣೆ ನಿವಾಸಿಯಾದ ಹುಣಸೂರು, ಕೆ.ಆರ್.ನಗರದಲ್ಲಿನ ಅಶ್ವಿನಿ ಡಯಾಗ್ನಸ್ಟಿಕ್ ಸೆಂಟರ್‍ನ ಶಂಕರ ಜಿ.ಎನ್., ಪಾಂಡವಪುರ ತಾಲೂಕು ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ. ಹಾಗೂ ಪಾಂಡವಪುರ ತಾಲೂಕು ಹರಳಹಳ್ಳಿ ಗ್ರಾಮದ ಜಬ್ಬರ್ ಬಂಧಿತರು.

ಪ್ರಕರಣದ ಈ ಆರೋಪಿಗಳನ್ನು ರವಿವಾರ ಬಂಧಿಸಿ ಅವರಿಂದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಉಳಿದ ಆರೋಪಿಗಳ ಶೋಧಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ತನಿಖಾ ತಂಡದ ಪ್ರಕಟನೆ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 15 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆವರಿಂದ ನಾಲ್ಕು ಸ್ಕ್ಯಾನಿಂಗ್ ಯಂತ್ರಗಳು, ನಾಲ್ಕು ಕಾರುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೀಗ ಬಂಧಿತ ಆರೋಪಿಗಳ ಸಂಖ್ಯೆ 18ಕ್ಕೆ ಏರಿದೆ. ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗಿದೆ.

ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿಯ ಆಲೆಮನೆಯಲ್ಲಿ, ಪಾಂಡವಪುರ ತಾಲೂಕಿನ ಆರೋಗ್ಯ ಇಲಾಖೆ ಡಿ ಗ್ರೂಪ್ ನೌಕರರೊಬ್ಬರ ವಸತಿಗೃಹ ಹಾಗೂ ನಾಗಮಂಗಲ ತಾಲೂಕು ಬೆಳ್ಳೂರಿನಲ್ಲಿ ಹೆಣ್ಣುಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣಗಳು ಬೆಳಕಿಗೆ ಬಂದಿದ್ದು, ಇನ್ನು ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News