×
Ad

ಮಂಡ್ಯ | ನಾಳೆ(ಎ.4) ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Update: 2024-04-03 20:16 IST

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಳೆ(ಎ.4) ಬೆಳಗ್ಗೆ 10.45ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ನಂತರ, 11 ಗಂಟೆಗೆ ಮಂಡ್ಯ ವಿವಿ ಮೈದಾನದಲ್ಲಿ ಬಹಿರಂಗಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ, ನಿಖಿಲ್ ಕುಮಾರಸ್ವಾಮಿ, ಯಧುವೀರ್ ಒಡೆಯರ್ ಸೇರಿದಂತೆ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಮಾಜಿ ಸಚಿವರು ಸೇರಿದಂತೆ ಜೆ.ಡಿಎಸ್ ಹಾಗೂ ಬಿಜೆಪಿ ಮುಖಂಡರುಗಳು ಭಾಗವಹಿಸಲಿದ್ದಾರೆ.

ಇದಕ್ಕೂ ಮುನ್ನ ಬೆಳಗ್ಗೆ 9ರಿಂದ ಅರಕೇಶ್ವರ, ಕಾಳಿಕಾಂಬ ಹಾಗೂ ಲಕ್ಷ್ಮಿ ಜನಾರ್ಧನಸ್ವಾಮಿ ದೇವಾಲಯದಲ್ಲಿ ಪೂಜೆಸಲ್ಲಿಸಲಿದ್ದು, 10.15ರಿಂದ ನೀರಾವರಿ ಇಲಾಖೆ ಮುಂಭಾಗದ ಕಾವೇರಿ ಮಾತೆ, ವಿಶ್ವೇಶ್ವರಯ್ಯ, ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪಾರ್ಕಿನಲ್ಲಿರುವ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಂ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News