ಸಾಂದರ್ಭಿಕ ಚಿತ್ರ | PC : Gemini AI

ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಬಳಿ ವರುಣಾ ನಾಲೆಯಲ್ಲಿ ಈಜುತ್ತಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿರುವುದು ವರದಿಯಾಗಿದೆ.

ಮೈಸೂರು ನಗರದ ಪಾರ್ಥಸಾರತಿ(20) ಹಾಗೂ ನಂಜನಗೂಡಿನ ಅರ್ಜುನ್ (20) ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ವಿದ್ಯಾರ್ಥಿಗಳಾಗಿದ್ದು, ಸ್ನೇಹಿತರ ಜೊತೆ ನಾಲೆಯಲ್ಲಿ ಈಜಾಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಜಿಟಿಟಿಸಿಯ ಕಾರ್ಯಗಾರಕ್ಕೆ ಬಂದಿದ್ದ ಮೈಸೂರು ಎನ್.ಐ.ಇ. ಕಾಲೇಜಿನ ಮೂರನೇ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಇವರು, ಶುಕ್ರವಾರ ನೀರಿನಲ್ಲಿ ಈಜುತ್ತಿದ್ದಾಗ ಕೊಚ್ಚಿಹೋಗಿದ್ದರು.

ನಾಲೆಯಲ್ಲಿ ನೀರು ನಿಲ್ಲಿಸಿ ವಿದ್ಯಾರ್ಥಿಗಳ ಶೋಧನೆ ನಡೆಸಲಾ ಗಿತ್ತು. ಶನಿವಾರ ಮೃತದೇಹಗಳು ಪತ್ತೆಯಾಗಿವೆ. ಈ ಸಂಬಂಧ ಕೆ.ಆರ್.ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor