×
Ad

ಮಂಡ್ಯ | ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Update: 2024-10-20 22:42 IST

ಸಾಂದರ್ಭಿಕ ಚಿತ್ರ

ಮಂಡ್ಯ: ಮದ್ದೂರು ತಾಲೂಕಿನ ದೇಶಹಳ್ಳಿ (ಮದ್ದೂರು) ಕೆರೆಯಲ್ಲಿ ಈಜುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರವಿವಾರ ಸಂಜೆ ನಡೆದಿದೆ

ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು(14) ಮತ್ತು ತೇಜಸ್ ಅವರ ಪುತ್ರ ರಂಜು(17) ನೀರುಪಾಲಾದ ಬಾಲಕರಾಗಿದ್ದಾರೆ ಎಂದು ತಿಳಿದು ಬಂದಿದೆ.

ನೀರುಪಾಲಾದ ಇಬ್ಬರು ವಿದ್ಯಾರ್ಥಿಗಳು ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮೃತ ಯುವಕ ಮುತ್ತು ರಾಜು ಎಸೆಸ್ಸಲ್ಸಿ ವ್ಯಾಸಂಗ ಮಾಡುತ್ತಿದ್ದು, ರಂಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಮೃತದೇಹಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News