×
Ad

Mandya | ಪಂಪ್‌ಸೆಟ್‌ಗಳ ಕೇಬಲ್ ಕಳವು ಆರೋಪ: ಯುವಕರಿಗೆ ಗ್ರಾಮಸ್ಥರಿಂದ ಥಳಿತ

Update: 2026-07-01 19:11 IST

ಮಂಡ್ಯ : ಜಮೀನಿನಲ್ಲಿ ಬೋರ್‌ವೆಲ್ ಮತ್ತು ಪಂಪ್‌ಸೆಟ್‌ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಆರೋಪ ಸಂಬಂಧ ಮೂವರು ಯುವಕರನ್ನು ಗ್ರಾಮಸ್ಥರು ಹಿಡಿದು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ತಾಲೂಕಿನ ಉಪ್ಪರಕನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.

ತಂಗಳಗೆರೆ, ಉಪ್ಪರಕನಹಳ್ಳಿ, ದ್ಯಾಪಸಂದ್ರ ಮತ್ತಿತರ ಅಕ್ಕಪಕ್ಕದ ಗ್ರಾಮಗಳ ವ್ಯಾಪ್ತಿಯ ಜಮೀನಿನ ಬಳಿ ಕೊರೆಸಲಾಗಿದ್ದ ಕೊಳವೆಬಾವಿ ಮತ್ತು ಇತರೆ ಬಾವಿಗಳ ಪಂಪ್‌ಸೆಟ್‌ಗಳ ಕೇಬಲ್ ಕಳ್ಳತನ ಮಾಡುತ್ತಿದ್ದು, ರೈತರು ಆತಂಕಕ್ಕೊಳಗಾಗಿದ್ದರು ಎನ್ನಲಾಗಿದೆ.

ಕಳ್ಳರನ್ನು ಕಂಡುಹಿಡಿಯಲು ಪ್ರಯತ್ನಪಟ್ಟಿದ್ದ ರೈತರಿಗೆ, ಕಳವು ಮಾಡುತ್ತಿದ್ದ ಈ ಯುವಕರು ಸಿಕ್ಕಿಬಿದ್ದಿದ್ದಾರೆ.  ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ದಾವಿಸಿ ರೈತರನ್ನು ಸಮಾಧಾನಪಡಿಸಿ ಯುವಕರನ್ನು ವಶಕ್ಕೆ ಪಡೆದು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News