×
Ad

ಸಂಸದೆ ಸುಮಲತಾ ಅಂಬರೀಷ್ ಬಿಜೆಪಿ ಸೇರ್ಪಡೆ

Update: 2024-04-05 12:47 IST

ಮಂಡ್ಯ :  ಸಂಸದೆ ಸುಮಲತಾ ಅಂಬರೀಷ್ ಅವರು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದ ಸುಮಲತಾ, ಬಿಜೆಪಿಗೆ ಸೇರುವುದಾಗಿ ಘೋಷಣೆ ಮಾಡಿದ್ದರು.

ಬುಧವಾರ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ್ದ ಅವರು, ಟಿಕೆಟ್ ಸಿಗದಿದ್ದರೆ ಹಲವು ರಾಜಕಾರಣಿಗಳು ಪಕ್ಷ ಬದಲಾಯಿಸುತ್ತಾರೆ. ಆದರೆ, ನಾನು ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದರು.‌

ಕ್ರಿಕೆಟಿಗ ದೊಡ್ಡ ಗಣೇಶ ಮತ್ತು ಕೊಪ್ಪಳ ಮಾಜಿ ಸಂಸದ ಶಿವರಾಮಗೌಡ ಅವರೂ ಇದೇ ಸಂದರ್ಭದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್‍ದಾಸ್ ಅಗರವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್, ಮಾಜಿ ಸಚಿವ ಮುನಿರತ್ನ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ನಾರಾಯಣಗೌಡ, ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್‍ಕುಮಾರ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News