ನಾಗಮಂಗಲ ಗಲಭೆ ಪ್ರಕರಣ | ಆರ್.ಅಶೋಕ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲು
Update: 2024-09-18 22:11 IST
ಆರ್.ಅಶೋಕ್/ಶೋಭಾ ಕರಂದ್ಲಾಜೆ
ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಾಗಮಂಗಲ ಗಲಭೆಗೆ ಪ್ರಕರಣಕ್ಕೆ ಸಂಬಂಧಿಸಿಲ್ಲದ ವಿಡಿಯೋ, ಫೋಟೋ ಪೋಸ್ಟ್ ಮಾಡುವ ಮೂಲಕ ದೊಂಬಿ, ಗಲಭೆಗೆ ಪ್ರಚೋದನೆ ಆರೋಪಡಿ ಅಶೋಕ್ ಮತ್ತು ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 192ರ ಅಡಿ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ (ಸುವೋ ಮೋಟೋ) ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.