×
Ad

ಮಂಡ್ಯ: ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆ

Update: 2025-04-12 23:56 IST

ಸಾಂದರ್ಭಿಕ ಚಿತ್ರ (PTI)

ಮಂಡ್ಯ: ನಾಗಮಂಗಲ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆ ಬಳಿ ಇರುವ ಕದಸದ ತೊಟ್ಟಿಯಲ್ಲಿ ನವಜಾತ ಶಿಶು ಶನವಾರ ಮುಂಜಾನೆ ಪತ್ತೆಯಾಗಿರುವುದು ವರದಿಯಾಗಿದೆ.

ಮಗು ಅಳುತ್ತಿರುವುದನ್ನು ಕೇಳಿದ ಸ್ಥಳೀಯರು ಕಸದ ತೊಟ್ಟಿಯಲ್ಲಿ ನೋಡಿದಾಗ ನವಜಾತ ಶಿಶು ಪತ್ತೆಯಾಗಿದೆ. ಹೆಣ್ಣುಮಗು ಎಂಬ ಕಾರಣಕ್ಕೆ ಜನಿಸಿದ ದಿನವೇ ಪೋಷಕರು ಕಸದ ತೊಟ್ಟಿಗೆ ಹಾಕಿ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಮಗುವಿಗೆ ಮೂರು ದಿನಗಳ ಕಾಲ ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು. ನಂತರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗುವುದು ಎಂದು ಸಿಡಿಪಿಒ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಘಟನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News