×
Ad

ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ : ನಿಶ್ಚಲಾನಂದನಾಥ ಸ್ವಾಮೀಜಿ

Update: 2025-07-11 23:36 IST

ನಿಶ್ಚಲಾನಂದನಾಥ ಸ್ವಾಮೀಜಿ/ಡಿ.ಕೆ.ಶಿವಕುಮಾರ್

ಮಂಡ್ಯ : ಕಾಂಗ್ರೆಸ್ ಪಕ್ಷ 136 ಸ್ಥಾನ ಗಳಿಸಲು ಡಿ.ಕೆ.ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದು, ಅವರು ಮುಖ್ಯಮಂತ್ರಿ ಆಗಬೇಕು ಎಂದು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಅವರು ಸಿಎಂ ಆಗುವುದು ನಿಶ್ಚಿತ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಡಾ.ನಿಶ್ಚಲಾನಂದನಾಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷಕ್ಕಾಗಿ ದುಡಿದ ಹಿರಿಯರಿಗೆ ಸಿಎಂ ಆಗುವ ಹಂಬಲ ಇದ್ದೇ ಇರುತ್ತದೆ. ಅದೇ ರೀತಿ ನಾವು ಕೂಡ ಸಿಎಂ ಆಗಲಿ ಎಂದು ಬಯಸುತ್ತೇವೆ. ಡಿ.ಕೆ.ಶಿವಕುಮಾರ್ ಪಕ್ಷದ ಶಿಸ್ತಿನ ಸಿಪಾಯಿ. ತಾಳ್ಮೆಯಿಂದ ಕಾಯ್ದು ಒಳ್ಳೆಯ ಸ್ಥಾನ ಪಡೆದುಕೊಳ್ಳುತ್ತಾರೆ ಎಂದರು.

ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಲಿ ಎಂದು ಚುನಾವಣೆಯಲ್ಲಿ ಬೆಂಬಲಿಸಿತ್ತು. ಮೈಸೂರು ಬಾಗದಲ್ಲಿ ಹೆಚ್ಚು ಒಲವು ತೋರಿದ್ದಕ್ಕಾಗಿ ಕಾಂಗ್ರೆಸ್‌ಗೆ ಹೆಚ್ಚು ಸೀಟುಗಳು ಬಂದವು. ಹೈಕಮಾಂಡ್ ಯಾವ ನಿರ್ಧಾರ ಮಾಡುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಅವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News