×
Ad

ಗಣಿನಾಡು ಬಳ್ಳಾರಿಯಲ್ಲಿ ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Update: 2024-12-22 13:27 IST
ಕನ್ನಡ ಸಾಹಿತ್ಯ ಪರಿಷತ್​ | PC : wikipedia.org

ಮಂಡ್ಯ : ಮುಂದಿನ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಿದ್ದು, ಈ ಮೂಲಕ 66 ವರ್ಷಗಳ ಬಳಿಕ ಗಣಿನಾಡಿಗೆ ನುಡಿತೇರು ಎಳೆಯುವ ಅವಕಾಶ ಸಿಕ್ಕಂತಾಗಿದೆ.

ಶನಿವಾರ ರಾತ್ರಿ ನಗರದ ಖಾಸಗಿ ಹೋಟೆಲ್‌ನಲ್ಲಿ ಜರುಗಿದ ಎಲ್ಲ ಜಿಲ್ಲೆಗಳ ಕಸಾಪ ಪ್ರತಿನಿಧಿಗಳ ಸಭೆಯಲ್ಲಿ ಗಡಿನಾಡು ಬಳ್ಳಾರಿಯಲ್ಲಿ ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು.

ಕಳೆದ ಬಾರಿ ಹಾವೇರಿಯಲ್ಲಿ ನಡೆದ ಅಖಿಲ ಭಾರತ ಸಮ್ಮೇಳನದಲ್ಲಿ 87ನೇ ಸಮ್ಮೇಳನ ಬಳ್ಳಾರಿಗೆ ನೀಡಬೇಕು ಎಂಬ ತೀವ್ರ ಒತ್ತಾಯ ಕೇಳಿಬಂತು. ಆದರೆ, ಕೊನೆ ಗಳಿಗೆಯಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.

ಈ ಬಾರಿ ಚಿಕ್ಕಮಗಳೂರು, ಬಳ್ಳಾರಿ ಅಥವಾ ಹೊಸದಿಲ್ಲಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚೆಗಳು ಸಾಗಿದ್ದವು. ಆದರೆ, ಅಂತಿಮವಾಗಿ ಮುಂದಿನ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾ ನಂತರ 1958 ರಲ್ಲಿ ವಿ.ಕೃ.ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಸುದೀರ್ಘ 66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ ಲಭಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News