ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು
Update: 2025-09-05 19:32 IST
ಸಾಂದರ್ಭಿಕ ಚಿತ್ರ
ಶ್ರೀರಂಗಪಟ್ಟಣ: ತಾಲೂಕಿನ ಬಲಮುರಿ ಬಳಿಯ ಎಡಮುರಿ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿರುವುದು ವರದಿಯಾಗಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ಬಿಬಿಎ ವ್ಯಾಸಂಗ ಮಾಡುತ್ತಿದ್ದ ಶ್ಯಾಂ(20) ಹಾಗೂ ವೆಂಕಟೇಶ (20) ಸಾವನ್ನಪ್ಪಿದವರು.
ಕಾಲೇಜಿಗೆ ರಜೆ ಇದ್ದ ಹಿನ್ನೆಲೆಯಲ್ಲಿ 9 ಮಂದಿ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದು, ಈ ವೇಳೆ ಕಾವೇರಿ ನದಿಗೆ ಇಳಿದ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಡಿವೈಎಸ್ಪಿ ಶಾಂತ ಮಲ್ಲಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಕೆ.ಆರ್.ಎಸ್. ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.