×
Ad

ಮಂಗಳೂರು: ಯುವಕನ ಕೊಲೆ; ಆರೋಪಿ ಸೆರೆ

Update: 2023-07-08 21:42 IST

ಮಂಗಳೂರು: ನಗರದ ಮುಳಿಹಿತ್ಲುನಲ್ಲಿ ಅಂಗಡಿ ಮಾಲಕನೋರ್ವ ತನ್ನ ಬಳಿ ಕೆಲಸ ಮಾಡುತ್ತಿದ್ದ ಯುವಕನನ್ನು ಬೆಂಕಿ ಹಚ್ಚಿ ಸುಟ್ಟು ಕೊಲೆ ಮಾಡಿದ್ದಾನೆ ಎನ್ನಲಾದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉತ್ತರ ಭಾರತದ ಕಾರ್ಮಿಕ ಗಜ್ಞಾನ ಯಾನೆ ಜಗ್ಗು (35) ಕೊಲೆಯಾದ ಯುವಕ. ಪಾಂಡೇಶ್ವರ ನಿವಾಸಿ ತೌಸಿಫ್ ಹುಸೈನ್ ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು ನಗರದ ಮುಳಿಹಿತ್ಲು ಜಂಕ್ಷನ್‌ನಲ್ಲಿರುವ ಜನರಲ್ ಸ್ಕೋರ್ ಹಿಂಭಾಗದಲ್ಲಿರುವ ಕೋಣೆಯಲ್ಲಿ ಈ ಘಟನೆ ನಡೆದಿದೆ. ತೌಸಿಫ್ ಹುಸೈನ್ ತನ್ನ ಬಳಿ ಕೆಲಸ ಮಾಡುತ್ತಿದ್ದ ಜಗ್ಗುನನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡುವ ಉದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟು ನಂತರ ಸಾಕ್ಷ್ಯ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಸ್ಪರ್ಶವಾಗಿರುವುದಾಗಿ ಮಾಹಿತಿ ನೀಡಿದ್ದಾನೆ ಎಂದು ತಿಳಿದುಬಂದಿದೆ.

ಜಗ್ಗುನನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದು, ಆತನನ್ನು ಪರೀಕ್ಷಿಸಿದ ವೈದ್ಯಾಧಿಕಾರಿಗಳು ಮೃತಪಟ್ಟಿರುವುದಾಗಿ ಘೋಷಿಸಿದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ದಕ್ಷಿಣ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News